Posts

Showing posts from May, 2015

NEWS FEED

1. Govt has launched schoolarships and educational loans. For more information please visit www.vidyalakshmi.co.in

2. Get latest information about malware, security best practices, countermeasures, security tools and download the- Free Bot Removal Tool- to secure/disinfect your system. Visit - www.cyberswachhtakendra.gov.in. An initiative by Govt. of India, Ministry of Electronics and IT (MeitY)

3. Advertisement page is available. Interested may contact Admin at 8880207888 for placement of any advertisement.It's totally FREE!!

ಇದು ಯಾರು ಬರೆದ ‘ವಿಧಿ’ಯೋ?

ಈ ದೇಶದಲ್ಲಿ ಕೆಲವು ವಿಷಯಗಳ ಬಗ್ಗೆ ಮಾತಾಡಲೇಬಾರದು, ಪ್ರಶ್ನಿಸಕೂಡದು. ಅಂಥ ವಿಷಯವನ್ನು ಪ್ರಸ್ತಾಪಿಸಿದರೆ ಸಾಕು; ಎಲ್ಲರೂ ನಿಮ್ಮ ಮೇಲೆ ಎಗರಿ ಬಂದು ಮುಗಿಬೀಳುತ್ತಾರೆ. ಅಲ್ಲಿಗೆ ಬಾಯಿ ಮುಚ್ಚಬೇಕು. ಅಷ್ಟಾಗಿಯೂ ನೀವು ಸುಮ್ಮನಾಗದಿದ್ದರೆ ಬಾಯಿ ಮುಚ್ಚಿಸುವ ಇತರ ತಂತ್ರಗಳನ್ನು ಪ್ರಯೋಗಿಸಲಾಗುತ್ತದೆ. ಇಲ್ಲಸಲ್ಲದ ಹಣೆಪಟ್ಟಿಯನ್ನು ಅಂಟಿಸಲಾಗುತ್ತದೆ.
ಮೊನ್ನೆ ಜಮ್ಮುದಲ್ಲಿ ನಡೆದ ರ್ಯಾಲಿಯಲ್ಲಿ ಭಾರತೀಯ ಜನತಾಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ಬಗ್ಗೆ ಪ್ರಸ್ತಾಪಿಸಿದ್ದೇ ತಡ, ಎಲ್ಲ ಪಕ್ಷಗಳ ನಾಯಕರು ಮುರಕೊಂಡು ಬಿದ್ದವರಂತೆ ವರ್ತಿಸಿದರು. ಅಷ್ಟಕ್ಕೂ ಅಂದು ಮೋದಿ ಹೇಳಿದ್ದೇನು?
‘ಸಂವಿಧಾನದ 370ನೇ ವಿಧಿ ಬಗ್ಗೆ ಚರ್ಚೆಯಾಗಬೇಕಾದ ಅಗತ್ಯವಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದರಿಂದ ಪ್ರಯೋಜನವಾಗಿದೆಯೇ, ರಾಜ್ಯಕ್ಕೆ ಅದರಿಂದ ಲಾಭವಾಗಿದೆಯೇ ಎಂಬುದನ್ನು ಚರ್ಚಿಸುವ ಅಗತ್ಯವಿದೆ. ಒಂದು ವೇಳೆ ಇದರಿಂದ ಏನೂ ಪ್ರಯೋಜನ ಆಗಿಲ್ಲವೆಂಬುದು ಮನವರಿಕೆಯಾದರೆ, ಈ ವಿಧಿಯನ್ನು ಮುಂದುವರಿಸಬೇಕೆಂಬ ಆಗ್ರಹವನ್ನು ಕೈ ಬಿಡಬೇಕು’ ಎಂದು ಮೋದಿ ಅಂದು ಹೇಳಿದರು.
ಅದೇ ರ್ಯಾಲಿಯಲ್ಲಿ ಮೋದಿ ಹೇಳಿದ ಇನ್ನೊಂದು ಸಂಗತಿಯೇನೆಂದರೆ-’ಜಮ್ಮು-ಕಾಶ್ಮೀರದಲ್ಲಿ ಮಹಿಳೆಯರಿಗೆ ಸಮಾನ ಹಕ್ಕು ನೀಡಲಾಗುತ್ತಿಲ್ಲ. ಅಲ್ಲಿನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕಾಶ್ಮೀರ…

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ/ Elli hoguviri nilli modagale

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ
 ನಾಲ್ಕು ಹನಿಯ ಚೆಲ್ಲಿ
 ದಿನದಿನವು ಕಾದು ಬಾಯಾರಿ ಬೆಂದೆ
 ಬೆಂಗದಿರ ತಾಪದಲ್ಲಿ .
               ನನ್ನೆದೆಯ ಹಸಿರ ಉಸಿರು ಕುಗ್ಗಿದರು
              ಬರಲಿಲ್ಲ ನಿಮಗೆ ಕರುಣ
              ನನ್ನ ಹೃದಯದಲಿ ನೋವು ಮಿಡಿಯುತಿದೆ
              ನಾನು ನಿಮಗೆ ಶರಣ.
ಬಡವಾಗದ ನನ್ನ ಒಡಲುರಿಯ ಬೇಗೆ 
ನಿಮಗರಿವು ಆಗಲಹುದೇ?
ನೀಲಗಗನದಲಿ ತೇಲಿ ಹೋಗುತಿಹ
 ನಿಮ್ಮನೆಳೆಯಬಹುದೇ?
               ಬಾಯುಂಟು ನನಗೆ, ಕೂಗಬಲ್ಲೇನಾ
              ನಿಮ್ಮೆದೆಯ ಪ್ರೇಮವನ್ನು.
               ನೀವು ಕರುಣಿಸಲು ನನ್ನ ಹಸಿರೆದೆಯು
              ಉಸಿರುವುದು ತೋಷವನ್ನು.
ಓ ಬನ್ನಿ ಬನ್ನಿ, ಓ ಬನ್ನಿ ಬನ್ನಿ
 ನನ್ನೆದೆಗೆ ತಂಪತನ್ನಿ,
ನೊಂದ ಜೀವರಿಗೆ ತಂಪನೀಯುವುದೇ
 ಪರಮ ಪೂಜೆಯೆನ್ನಿ.

- ಡಾ. ಜಿ. ಎಸ್. ಶಿವರುದ್ರಪ್ಪ

ಏಕತೆಗಾಗಿ ನಡೆಯಲಿದೆ ಓಟ, ಅವರಿಲ್ಲದಿದ್ದರೆ ತುಂಡು ತುಂಡಾಗಿರುತ್ತಿತ್ತು ಭಾರತದ ಭೂಪಟ!

ಇಸ್ ದೇಶ್ ಕೋ ಹಮೇಶಾ ಏಕ್ ಗಿಲಾಶಿಕ್ಷಾ ರಹೇಗಾ. ಹರ್ ಹಿಂದುಸ್ಥಾನಿ ಕೆ ದಿಲ್ ಮೇ ಏಕ್ ದರ್ದ್ ರಹೇಗಾ. ಕಾಶ್ ಸರ್ದಾರ್ ಸಾಬ್, ಹಮಾರೆ ಪೆಹ್ಲೆ ಪ್ರಧಾನ್ ಮಂತ್ರಿ ಹೋತೇ ತೋ ಆಜ್ ದೇಶ್ ಕಿ ತಕ್ದಿರ್ ಭೀ ಅಲಗ್ ಹೋತಿ, ದೇಶ್ ಕಿ ತಸ್ವೀರ್ ಭೀ ಅಲಗ್ ಹೋತಿ! ಅಂದರೆ ಈ ದೇಶಕ್ಕೆ ಶಾಶ್ವತವಾಗಿ ಒಂದು ವಿಷಾದವಿರಲಿದೆ. ಪ್ರತಿ ಭಾರತೀಯನಿಗೂ ಅವನ ಹೃದಯದಲ್ಲಿ ಒಂದು ನೋವು ಇರಲಿದೆ. ಒಂದು ವೇಳೆ, ಸರ್ದಾರ್ ಪಟೇಲ್‌ರು ಮೊದಲ ಪ್ರಧಾನಿಯಾಗಿರುತ್ತಿದ್ದರೆ ಈ ದೇಶದ ಚಹರೆಯೂ ಬದಲಾಗಿರುತಿತ್ತು, ಹಣೆಬರಹವೂ ಭಿನ್ನವಾಗಿರುತ್ತಿತ್ತು!
ಹಾಗಂತ ಕಳೆದ ಅಕ್ಟೋಬರ್ 29ರಂದು “ಕಾಂಗ್ರೆಸ್‌” ಪ್ರಧಾನಿ ಮನಮೋಹನ್ ಸಮ್ಮುಖದಲ್ಲೇ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹೇಳಿಬಿಟ್ಟರು!
ಪ್ರಧಾನಿ ಸಿಡಿಮಿಡಿಗೊಂಡರು. “ಸರ್ದಾರ್ ಪಟೇಲ್ ಒಬ್ಬ ಜಾತ್ಯತೀತ ನಾಯಕ” ಎನ್ನುವ ಮೂಲಕ ಕೋಮುವಾದಿ ಬಿಜೆಪಿಗೆ ಸರ್ದಾರ್ ಪಟೇಲ್ ಹೆಸರೆತ್ತುವ ಅರ್ಹತೆ ಇಲ್ಲ ಎಂದು ಪರೋಕ್ಷವಾಗಿ ಚುಚ್ಚಿದರು. ಸರ್ದಾರ್ ಪಟೇಲ್, ಲಾಲ್ ಬಹಾದ್ದೂರ್ ಶಾಸ್ತ್ರಿಯವರು ಇಡೀ ದೇಶದ ನಾಯಕರೇ ಹೊರತು, ಯಾವುದೇ ಒಂದು ಪಕ್ಷಕ್ಕೆ ಸೀಮಿತವಾದವರಲ್ಲ. ಇದೇನೇ ಇರಲಿ, ಪ್ರಧಾನಿ ಮನಮೋಹನ್ ಸಿಂಗ್ ಅವರು ಕೋಮುವಾದಿ ಸೂತ್ರವನ್ನಿಟ್ಟುಕೊಂಡು ಚುಚ್ಚಲು ಸಾಧ್ಯವಾಯಿತೇ ಹೊರತು, ನರೇಂದ್ರ ಮೋದಿ ಹೇಳಿದ್ದನ್ನು ಅಲ್ಲಗಳೆಯಲು ಸಾಧ್ಯವಾಗಲಿಲ್ಲ.
ಹಾಗಾದರೆ ಸರ್ದಾರ್ ಪಟೇಲ್ ನಿಜಕ್ಕೂ ದೇಶದ ಮೊದಲ ಪ್ರಧಾನಿಯಾಗಬೇಕಿತ್ತೆ?
ಅವರು ಪ್ರಧಾ…

ಬಂದೇ ಬರತಾವ ಕಾಲ... / Bande barataava kaala

ಬಂದೇ ಬರತಾವ ಕಾಲ
 ಮಂದಾರ ಕನಸನು
 ಕಂಡಂಥ ಮನಸನು
 ಒಂದು ಮಾಡುವ ಸ್ನೇಹಜಾಲ
                              - ಬಂದೇ ಬರತಾವ ಕಾಲ
 ಮಾಗಿಯ ಎದೆ ತೂರಿ
 ಕೂಗಿತೊ ಕೋಗಿಲ,
ರಾಗದ ಚಂದಕೆ
 ಬಾಗಿತೊ ಬನವೆಲ್ಲ,
ತೂಗುತ ಬಳ್ಳಿ ಮೈಯನ್ನ
 ಸಾಗದು ಬಾಳು ಏಕಾಕಿ ಎನುತಾವ
                             - ಬಂದೇ ಬರತಾವ ಕಾಲ
 ಹುಣ್ಣಿಮೆ ಬಾನಿಂದ
 ತಣ್ಣನೆ ಸವಿಹಾಲು
 ಚೆಲ್ಲಿದೆ ಮೆಲ್ಲನೆ
 ತೊಯಿಸಿದೆ ಬುವಿಯನು
 ಮುಸುಕಿದೆ ಮಾಯೆ ಜಗವನು
 ಬುವಿ ಬಾನು ಸೇರಿ ಹರಸ್ಯಾವ ಬಾಳನು
                            - ಬಂದೇ ಬರತಾವ ಕಾಲ

- ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ

ಭಾರತ ರತ್ನಕ್ಕೆ ತಮ್ಮನ್ನು ಆಯ್ಕೆ ಮಾಡಿದಾಗ ಪ್ರಧಾನಿಗೇ ಎಚ್ಚರಿಕೆ ಕೊಟ್ಟ ಮಹಾನುಭಾವರೊಬ್ಬರಿದ್ದಾರೆ ಎಂದರೆ ನಂಬುತ್ತೀರಾ?!

ಖ್ಯಾತ ವಿಜ್ಞಾನಿ ಸಿಎನ್‌ಆರ್ ರಾವ್ ಹಾಗೂ ಕ್ರಿಕೆಟ್‌ನ ದಂತಕಥೆ ಸಚಿನ್ ತೆಂಡೂಲ್ಕರ್ ಈ ದೇಶದ ಮೇರು ಪುರಸ್ಕಾರವಾದ ಭಾರತ ರತ್ನವನ್ನು ಅತ್ಯಂತ ಧನ್ಯತೆಯಿಂದ ಸ್ವೀಕರಿಸಿದರು. 2013 ನವೆಂಬರ್ 16ರಂದು ಈ ಪುರಸ್ಕಾರಕ್ಕೆ ತಮ್ಮನ್ನು ಆಯ್ಕೆ ಮಾಡಿದಾಗಲೂ ರಾವ್ ಹಾಗೂ ಸಚಿನ್ ಸರ್ಕಾರಕ್ಕೆ ಧನ್ಯತೆಯನ್ನು ವ್ಯಕ್ತಪಡಿಸಿದ್ದರು. ಅದರಲ್ಲಿ ತಪ್ಪೇನೂ ಇಲ್ಲ ಬಿಡಿ.

ಆದರೆ ಭಾರತ ರತ್ನಕ್ಕೆ ತಮ್ಮನ್ನು ಆಯ್ಕೆ ಮಾಡಿದಾಗ ಪ್ರಧಾನಿಗೇ ಎಚ್ಚರಿಕೆ ಕೊಟ್ಟ ಮಹಾನುಭಾವರೊಬ್ಬರಿದ್ದಾರೆ ಎಂದರೆ ನಂಬುತ್ತೀರಾ?!
ಈ ಪುರಸ್ಕಾರ ಪ್ರಾರಂಭವಾಗಿದ್ದು 1954ರಲ್ಲಿ. ಮೊದಲನೇ ಸಲ ಸಿ. ರಾಜಗೋಪಾಲಚಾರಿ, ಸಿ.ವಿ. ರಾಮನ್ ಹಾಗೂ ರಾಧಾಕೃಷ್ಣನ್‌ಗೆ ಭಾರತ ರತ್ನವನ್ನು ಕೊಡಲಾಯಿತು. 1955ರ ಸಾಲಿನ ಪುರಸ್ಕಾರ ಘೋಷಣೆಯಾದಾಗ ನಮ್ಮ ಕನ್ನಡ ನಾಡಿನ ಸುಪುತ್ರ ಸರ್. ಎಂ. ವಿಶ್ವೇಶ್ವರಯ್ಯನವರ ಹೆಸರಿತ್ತು. ಈ ದೇಶದ ಶ್ರೇಷ್ಠ ಪುರಸ್ಕಾರಕ್ಕೆ ತಮ್ಮನ್ನು ಆಯ್ಕೆ ಮಾಡಲಾಗಿದೆಯಲ್ಲಾ ಎಂದು ಹಿರಿಹಿರಿ ಹಿಗ್ಗುವ ಬದಲು, "ಅತ್ಯಂತ ಶ್ರೇಷ್ಠ ನಾಗರಿಕ ಪುರಸ್ಕಾರವನ್ನು ನೀಡಿದ್ದಕ್ಕೆ ಪ್ರತಿಯಾಗಿ ನಾನು ನಿಮ್ಮ ಸರ್ಕಾರವನ್ನು ಹೊಗಳಬೇಕೆಂದು ನಿರೀಕ್ಷಿಸಬೇಡಿ. ನಾನು ಈಗಲೂ, ಮುಂದೆಯೂ ನಿಮ್ಮ ಟೀಕಾಕಾರನೇ" ಎಂದುಬಿಟ್ಟರು ವಿಶ್ವೇಶ್ವರಯ್ಯ. "ನಿಮ್ಮ ಬೌದ್ಧಿಕ ಸಮಗ್ರತೆ, ಸಾಮರ್ಥ್ಯ, ಸಾಧನೆ, ನಿಷ್ಪಕ್ಷಪಾತ ಧೋರಣೆಯನ್ನು ಗಣನೆಗೆ ತೆಗೆದುಕೊಂಡು ಭಾರತ ರತ್ನವನ್ನು ನಿಮಗೆ ನೀಡಲಾಗುತ್…

ಸುಡು ಬಯಲ ಗಾಳಿ ನಾನು / Sudu bayala gaali naadu

ಸುಡು ಬಯಲ ಗಾಳಿ ನಾನು
 ಸುಳಿಯೇ ಪರಿಮಳವೇ ನೀನು
 ಕೊರಗಿ ಮರುಗುತಲಿರುವ
 ಕರುಕು ಬಿರುಕಿನ ನೆಲಕೆ
 ಸುರಿಯೆ ಮಳೆಯಾಗಿ ನೀನು ||
ಯಾರು ನೆಟ್ಟರು ಇಲ್ಲಿ
 ಮುಳ್ಳು ಲೋಹದ ಬಳ್ಳಿ
 ಬೇರುಗಳು ಬರಲು ಬರಲು
 ದೂರ ಗಗನದ ನಾಡು
 ಖಾಲಿ ನೀಲಿಯ ಜಾಡು
 ತೋರೆ ಕಾರ್ಮುಗಿಲ ಕುರುಳು ||
ಸಾಕು ಯಾತನೆ ಚಿಂತೆ
 ಲೋಕಗಳು ನನ್ನಂತೆ
 ದೇಕುತಿವೆ ನಿನ್ನ ಕಡೆಗೆ
 ಕರೆಯೇ ಜೀವದ ಗೋವು
 ಮೆರೆಯೇ ಗೋಕುಲವನ್ನು
 ಬೇಕು ನಂದನ ಇಳೆಗೆ ||

- ಹೆಚ್. ಎಸ್. ಶಿವಪ್ರಕಾಶ್

yariguntu....yarigilla..

ಯಾರಿಗುಂಟು ಯಾರಿಗಿಲ್ಲ ಬಾಳೆಲ್ಲ ಬೇವು ಬೆಲ್ಲ ||
ಬಂದದ್ದೆಲ್ಲ ಈಸ ಬೇಕಯ್ಯ, ಗೆಣೆಯ
ಕಾಣದ್ದಕ್ಕೆ ಚಿಂತೆ ಯಾಕಯ್ಯ?
ಗೋಣು ಹಾಕಿ ಕೂಡ ಬ್ಯಾಡ, ಗತ್ತಿನಾಗೆ ಬಾಳ ನೋಡ
ಏಳು ಬೀಳು ಇರುವುದೇನೆ ಇಲ್ಲಿ ಹುಟ್ಟಿ ಬಂದ ಮೇಲೆ
ಸುಖ ದುಃಖ ಕಾಡೋದೇನೆ ಉಪ್ಪುಖಾರ ತಿಂದ ಮೇಲೆ
ಕಷ್ಟ ಮೆಟ್ಟಿ ಸಾಗ ಬೇಕಯ್ಯ, ಓ! ಗೆಣೆಯ
ಕೈಯ ಚೆಲ್ಲಿ ಕೊರಗ ಬೇಡಯ್ಯ
ಗೋಣು ಹಾಕಿ ಕೂಡ ಬ್ಯಾಡ, ಗತ್ತಿನಾಗೆ ಬಾಳ ನೋಡ
ಪ್ರೀತಿಪ್ರೇಮ ನಡೆದ ಮೇಲೆ ತಪ್ಪೋದಿಲ್ಲ ರಾಸಲೀಲೆ
ಕದ್ದುಮುಚ್ಚಿ ನಡೆಯೋ ವೇಳೆ ಮನಸಿನಲ್ಲಿ ತೂಗುಯ್ಯಾಲೆ
ಒಳಗೆ ಹೊರಗೆ ಯಾಕೆ ಬೇಕಯ್ಯ? ಓ! ಗೆಣೆಯ
ಕಣ್ಣು ತೆರೆದು ಲೋಕ ನೋಡಯ್ಯ
ಗೋಣು ಹಾಕಿ ಕೂಡ ಬ್ಯಾಡ, ಗತ್ತಿನಾಗೆ ಬಾಳ ನೋಡ
Video link:
https://www.youtube.com/watch?v=JzGvlA6eymk


yArigunTu yArigilla bALella bEvu bella ||
bandaddella eesa bEkayya, geNeya
kANadakke chinte yAkayya?
gONu hAki kooDa byADa, gattinAge bALa nODa
ELu beeLu iruvudEne illi huTTi banda mEle
sukha duhkha kADOdEne uppu khara tinda mEle
kashTa meTTi sAga bEkayya, O! geNeya
kaiya chelli koraga bEDayya
gONu hAki kooDa byADa, gattinAge bALa nODa
preeti prema naDeda mEle tappOdilla rAsa leele
kaddu mucchi naDeyO vELe manasinalli tooguyyAle
oLage horage yAke bE…

ಆನಂದಮಯ ಈ ಜಗ ಹೃದಯ... / anandamaya ee jaga hrudaya

ಆನಂದಮಯ ಈ ಜಗ ಹೃದಯ, ಏತಕೆ ಭಯ ಮಾಣೋ..
ಸೂರ್ಯೋದಯ ಚಂದ್ರೋದಯ, ದೇವರ ದಯ ಕಾಣೋ...
ಆನಂದಮಯ ಈ ಜಗ ಹೃದಯ...
ಬಿಸಿಲಿದು ಬರಿ ಬಿಸಿಲಲ್ಲವೋ, ಸೂರ್ಯನ ಕೃಪೆ ಕಾಣೋ.
ಸೂರ್ಯನು ಬರಿ ರವಿಯಲ್ಲವೋ, ಆ ಭ್ರಾಂತಿಯ ಮಾಣೋ.
ಆನಂದಮಯ ಈ ಜಗ ಹೃದಯ...
ರವಿವದನವೇ ಶಿವಸದನವೋ, ಬರಿ ಕಣ್ಣದು ಮಣ್ಣೋ.
ಶಿವನಿಲ್ಲದೆ ಸೌಂದರ್ಯವೇ, ಶವಮುಖದಾ ಕಣ್ಣೋ.
ಆನಂದಮಯ ಈ ಜಗ ಹೃದಯ...
ಉದಯದೊಳೇನ್ ಹೃದಯವ ಕಾಣ್, ಅದೇ ಅಮೃತದ ಹಣ್ಣೋ.
ಶಿವ ಕಾಣದೆ ಕವಿ ಕುರುಡನೋ, ಶಿವ ಕಾವ್ಯದ ಕಣ್ಣೋ.
ಆನಂದಮಯ ಈ ಜಗಹೃದಯ...
                                                                                 - ಕುವೆಂಪು

ನೇತಾಜಿ ನೆರಳು....ಚಲೋ ದಿಲ್ಲಿ ಎಂದು ಹೋದರೆಲ್ಲಿ?../ Netaji Neralu.... Chalo Dilli endu hodarelli??

Image
ಚಲೋ ದಿಲ್ಲಿ ಎಂದು ಹೋದರೆಲ್ಲಿ?

ಇಂಥದೊಂದು ಆಘಾತಕಾರಿ ಸುದ್ದಿ ಮೊದಲು ಹೊರಬಿದ್ದದ್ದು 1945ರ ಆಗಸ್ಟ್ 23ನೇ ತಾರೀಕು. ಸುದ್ದಿ ಬಿತ್ತರಿಸಿದ್ದು ಜಪಾನಿನ 'ರೇಡಿಯೋ ಟೋಕಿಯೋ'. ಇಡೀ ಜಗತ್ತು ಇವತ್ತಿಗೂ ಅನುಮಾನದಿಂದಲೇ ನೋಡುವ ಅತ್ಯಂತ ದೊಡ್ಡ ಐತಿಹಾಸಿಕ ಸುಳ್ಳೊಂದು ಸದ್ದಿಲ್ಲದೆ ಹೀಗೆ ಹುಟ್ಟಿಕೊಂಡಿತು!

ಅಂದು ರೇಡಿಯೋ ಟೋಕಿಯೋದ ನ್ಯೂಸ್ ರೀಡರ್ ಹೇಳಿದ್ದಾರದರೂ ಏನು ಗೊತ್ತೆ?
'ವಿಮಾನ ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡ ಮಿಸ್ಟರ್ ಸುಭಾಶ್ಚಂದ್ರಬೋಸ್ ಜಪಾನಿನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದರು. ಭಾರತದ 'ಆಜಾದ್ ಹಿಂದ್‌' ಪ್ರಾಂತೀಯ ಸರ್ಕಾರದ ಮುಖ್ಯಸ್ಥರಾಗಿದ್ದರು ಮಿ. ಬೋಸ್. ಆಗಸ್ಟ್ 16ನೇ ತಾರೀಕಿನಂದು ವಿಮಾನದ ಮೂಲಕ ಸಿಂಗಾಪುರದಿಂದ ಜಪಾನಿಗೆ ಪ್ರಯಾಣಿಸುತ್ತಿದ್ದರು. ಜಪಾನಿನ ರಾಜಧಾನಿ ಟೋಕಿಯೋದಲ್ಲಿ ಅಲ್ಲಿನ ಜಪಾನೀ ಸರ್ಕಾರದ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಲಿಕ್ಕಾಗಿ ಹೋಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಯಿತು. ಆಗಸ್ಟ್ ಹದಿನೆಂಟರ ಹದಿನಾಲ್ಕು ಗಂಟೆಗೆ (ಪೂರ್ವಾಹ್ನ ಎರಡು ಗಂಟೆಗೆ) ತೈಹೋಕು ವಿಮಾನ ನಿಲ್ದಾಣದ ಸಮೀಪ ಈ ಅಪಘಾತ ಸಂಭವಿಸಿತ್ತು. ತೀವ್ರವಾಗಿ ಗಾಯಗೊಂಡ ಬೋಸ್‌ರನ್ನು ಜಪಾನಿನ ಆಸ್ಪತ್ರೆಯೊಂದಕ್ಕೆ ದಾಖಲಿಸಿ  ಚಿಕಿತ್ಸೆ ನೀಡಲಾಯಿತಾದರೂ ಅವರು ಮಧ್ಯರಾತ್ರಿ ಸಾವನ್ನಪ್ಪಿದರು. ಬೋಸ್ ಅವರ ಜೊತೆಗೆ ಪ್ರಯಾಣಿಸುತ್ತಿದ್ದ ಲೆಫ್ಟಿನೆಂಟ್ ಜನರಲ್ ತ್ಸುನಾಮಸಾ ಶಿಡೈ ಅ…

ನಮ್ಮಿ೦ದ ದೇಶ.. ದೇಶದಿ೦ದ ಸಮಸ್ತ ಜಗತ್ತು./ Namminda Desha... Deshadinda jagattu....

ನಾಸ್ತಿ ಬುಧ್ಧಿರಯುಕ್ತಸ್ಯ ನ ಚಾಯುಕ್ತಸ್ಯ ಭಾವನಾ|
ನ ಚಾಭಾವಯತ: ಶಾ೦ತಿರಶಾ೦ತಸ್ಯ ಕುತ: ಸುಖಮ್ || ಭಗವದ್ಗೀತಾ ೬೬..
ನ ಅಸ್ತಿ ಇರುವುದಿಲ್ಲ, ಅಯುಕ್ತಸ್ಯ= ಪ್ರಸನ್ನತೆಯಿಲ್ಲದಿರುವವನು, ಭಾವನಾ= ಧ್ಯಾನ,
ಅಭಾವಯತ= ಕೊರತೆಯನ್ನು ಅನುಭವಿಸುತ್ತಿರುವವನು , ಆಶಾ೦ತಸ್ಯ= ಶಾ೦ತಿಯನ್ನು ಹೊ೦ದಿರದವನು,ಕುತ:= ಹೇಗೆ
ತಾತ್ಪರ್ಯ: ಪ್ರಸನ್ನತೆಯಿಲ್ಲದವನಿಗೆ ಬುಧ್ಧಿ (ಜ್ಞಾನ) ಇರುವುದಿಲ್ಲ. ಪ್ರಸನ್ನತೆಯಿಲ್ಲದಿರುವವನಿಗೆ ಧ್ಯಾನವೂ ಇರುವುದಿಲ್ಲ ಮತ್ತು ಧ್ಯಾನದ ಕೊರತೆಯಿರುವವನಿಗೆ ಶಾ೦ತಿಯಿರುವುದಿಲ್ಲ. ಶಾ೦ತಿಯಿಲ್ಲದವನಿಗೆ ಸುಖ ಅಥವಾ ಸ೦ತೋಷವೆಲ್ಲಿಯದು?
ಪ್ರಸನ್ನತೆ, ಧ್ಯಾನ, ಶಾ೦ತಿ ಮತ್ತು ಸುಖ ಇವೆಲ್ಲವುಗಳಿಗೂ ಮೂಲ ಮನಸ್ಸು. ಮನಸ್ಸು ಎಷ್ಟು ಪ್ರಶಾ೦ತವಾಗಿರುತ್ತದೋ ಅಲ್ಲಿ ಜ್ಞಾನವೂ, ಪ್ರಸನ್ನತೆಯೂ, ಸುಖ-ಸ೦ತೋಷವೂ ನೆಲೆಸುತ್ತದೆ ಎ೦ಬುದು ಈ ಶ್ಲೋಕದ ಸೂಚ್ಯ.ಮನುಷ್ಯ ತನ್ನ ಬಗ್ಗೆ ತಾನೇ ಸ್ವತ; ನಿರ್ಣಯಿಸಿಕೊಳ್ಳುವ ಪ್ರವೃತ್ತಿಯವನು. ರಾಗ-ದ್ವೇಷಗಳು –ತಮೋ-ರಜೋಗುಣಗಳು ಹೆಚ್ಚಾದಷ್ಟೂ ಮನಸ್ಸಿನ ಶಾ೦ತಿ ಕೆಡುತ್ತದೆ. ಆತ್ಮಾನ೦ದವು ನಮ್ಮಿ೦ದ ದೂರ ಸಾಗುತ್ತದೆ. ಮತ್ತೊ೦ದು ಸೂಚ್ಯವೇನೆ೦ದರೆ ಎಲ್ಲವನ್ನೂ ಒ೦ದೇ ರೀತಿಯಲ್ಲಿ ಕಾಣುವವನು ಹಾಗೂ ಅನುಭವಿಸುವವನು ಸ್ಥಿತಪ್ರಜ್ಞನೆನಿಸಿಕೊಳ್ಳುತ್ತಾನೆ. ಆದರೆ ಆ ಹಾದಿಯಲ್ಲಿ ಸಾಗಬೇಕಾದಾಗ ಮನಸ್ಸಿನ… ತನ್ಮೂಲಕ ಆತ್ಮನಿಯ೦ತ್ರಣ ಅತ್ಯಗತ್ಯ. ಇದಕ್ಕೊ೦ದು ದೃಷ್ಟಾ೦ತವನ್ನು ಇಲ್ಲಿ ಉಲ್ಲೇಖಿಸುವುದು ನನಗೆ ಸೂಕ್ತವೆನಿಸುತ್ತಿ…

1st Milestone.

Got support from 'KARADAVANI' Chief Editor- Shri. Ma. Bha. Perla. Selected stories and poets will be updated soon.


- Admin.

ದೀಪವು ನಿನ್ನದೇ, ಗಾಳಿಯು ನಿನ್ನದೇ / Deepavu ninnade Galiyu ninnade

ದೀಪವು ನಿನ್ನದೇ, ಗಾಳಿಯು ನಿನ್ನದೇ ಆರದಿರಲಿ ಬೆಳಕು. ಕಡಲು ನಿನ್ನದೇ, ಹಡಗು ನಿನ್ನದೇ, ಮುಳುಗದಿರಲಿ ಬದುಕು. ಬೆಟ್ಟವು ನಿನ್ನದೇ, ಬಯಲು ನಿನ್ನದೇ ಹಬ್ಬಿ ನಗಲಿ ಪ್ರೀತಿ. ನೆಳಲೋ, ಬಿಸಿಲೋ ಎಲ್ಲವು ನಿನ್ನದೇ ಇರಲಿ ಏಕರೀತಿ. ಆಗೊಂದು ಸಿಡಿಲು, ಈಗೊಂದು ಮುಗಿಲು ನಿನಗೆ ಅಲಂಕಾರ. ಅಲ್ಲೊಂದು ಹಕ್ಕಿ, ಇಲ್ಲೊಂದು ಮುಗುಳು ನಿನಗೆ ನಮಸ್ಕಾರ. ಅಲ್ಲಿ ರಣದುಂಧುಭಿ, ಇಲ್ಲೊಂದು ವೀಣೆ ನಿನ್ನ ಪ್ರತಿಧ್ವನಿ. ಆ ಮಹಾಕಾವ್ಯ, ಈ ಭಾವಗೀತೆ ನಿನ್ನ ಪದಧ್ವನಿ. - ಕೆ. ಎಸ್. ನರಸಿಂಹ ಸ್ವಾಮಿ

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ.../ Hendathiyobbalu maneyolagiddare...

Image
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನದದೆ ಕೋಟಿ ರುಪಾಯಿ
ಹೆಂಡತಿಯೊಬ್ಬಳು ಹತ್ತಿರವಿದ್ದರೆ ನಾನೂ ಒಬ್ಬ ಸಿಪಾಯಿ ||

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ಹುಣ್ಣಿಮೆ ಹೋಳಿಗೆ ದೀಪ
ಹೆಂಡತಿ ತವರಿಗೆ ಹೊರಡುವೆನೆಂದರೆ ನನಗಿಲ್ಲದ ಕೋಪ
ಕೈ ಹಿಡಿದವಳು ಕೈ ಬಿಡದವಳು ಮಾಡಿದ ಅಡಿಗೆಯೇ ಚಂದ
ನಾಗರ ಕುಚ್ಚಿನ ನಿಲು ಜಡೆಯವಳು ಈಕೆ ಬಂದುದೆಲ್ಲಿಂದ ?

ಕಬ್ಬಿಗನೂರಿನ ಅರಮನೆಯಿಂದ ಕನಸೇ ಇರಬೇಕು
ಅಲ್ಲಿಯ ದೊರೆತನ ಸಿಗುವಂತಿದ್ದರೆ ನನಗೇ ಸಿಗಬೇಕು
ತಾರೆಯ ಬೆಳಕಿನ ತುಂಬಿದ ಸಭೆಯಲಿ ಸುಂದರಿ ಮೆರೆದಾಳು
ನನ್ನೋಡನವಳು ಸಿಂಹಾಸನದಲಿ ಮೆಲ್ಲನೆ ನಕ್ಕಾಳು

ಚಂದಿರನೂರಿನ ಅರಮನೆಯಿಂದ ಬಂದವರೀಗೆಲ್ಲಿ ?
ಬೆಳ್ಳಿಯ ಕೋಟೆಯ ಬಾಗಿಲಿನಿಂದ ಬಂದವರೀಗೆಲ್ಲಿ ?
ಹೆಂಡತಿಯೊಂದಿಗೆ ಬಡತನ ದೊರೆತನ ಏನೂ ಭಯವಿಲ್ಲ
ಹೆಂಡತಿಯೊಲುಮೆಯ ಭಾಗ್ಯವನರಿಯದ ಗಂಡಿಗೆ ಜಯವಿಲ್ಲ

- ಕೆ.ಎಸ್. ನರಸಿಂಹಸ್ವಾಮಿ

Video link:
http://www.youtube.com/watch?v=nJPQ86Xnaow