Posts

Showing posts from June, 2015

NEWS FEED

1. Govt has launched schoolarships and educational loans. For more information please visit www.vidyalakshmi.co.in

2. Get latest information about malware, security best practices, countermeasures, security tools and download the- Free Bot Removal Tool- to secure/disinfect your system. Visit - www.cyberswachhtakendra.gov.in. An initiative by Govt. of India, Ministry of Electronics and IT (MeitY)

3. Advertisement page is available. Interested may contact Admin at 8880207888 for placement of any advertisement.It's totally FREE!!

ಬುಡವೇ ಭದ್ರವಿಲ್ಲದ ಮೇಲೆ ಕಟ್ಟಡ ಮಜಬೂತಾಗುವುದು ಹೇಗೆ? ( ‘ನೆಹರೂ ಪರದೆ ಸರಿಯಿತು’ ಪುಸ್ತಕದಿಂದ ಆಯ್ದ ಭಾಗ)

( ‘ನೆಹರೂ ಪರದೆ ಸರಿಯಿತು’ ಪುಸ್ತಕದಿಂದ ಆಯ್ದ ಭಾಗ)

ಥೂ! ಗಾಂಧೀಜಿ ಹೇಳ್ತಾರಲ್ಲ , ಗ್ರಾಮ ಸ್ವರಾಜ್ಯ-ಸ್ವದೇಶೀ … ಇವೆಲ್ಲ  ಯೋಚಿಸಲಿಕ್ಕೂ  ಅನರ್ಹವಾದವು’ ಹೀಗೆನ್ನುತ್ತಿದ್ದವರು ಯಾರಿರಬಹುದು ಹೇಳಿ? ಸಾವರ್ಕರಾ? ಅಂಬೇಡ್ಕರಾ? ಜಿನ್ನಾನಾ? ಪಟೇಲರಾ? ಖಂಡಿತಾ ಅಲ್ಲ, ಹಾಗೆನ್ನುತ್ತಿದ್ದವರು, ಸ್ವತಃ ಗಾಂಧೀಜಿಯವರ ಅನುಯಾಯಿ ನೆಹರೂ!
ಯಾರನ್ನು  ಗಾಂಧೀಜಿ ‘ನನ್ನ  ನಂತರ ನನ್ನ  ಮಾತನಾಡುವವ’ ಎಂದು ಕರೆಯುತ್ತಿದ್ದರೋ ಅದೇ ವ್ಯಕ್ತಿ. ಯಾರನ್ನು  ಇಡಿಯ ದೇಶ ಗಾಂಧೀಜಿಯ ಚಿಂತನೆಗಳ ಶಾಶ್ವತ ರೂಪ ಎಂದು ಭಾವಿಸುತ್ತಿದ್ದರೋ ಆತ. ಹೌದು ಅದೇ ನೆಹರೂ ಸ್ವದೇಶಿ ಚಿಂತನೆ ನಡೆಸಿದರೆ ದೇಶ ಹಾಳಾಗಿ ಹೋಗುತ್ತದೆ, ದೇಶವನ್ನು ಕಟ್ಟಬೇಕೆಂದರೆ ದೊಡ್ಡ ದೊಡ್ಡ  ಯಂತ್ರಗಳ ಮೇಲೆ ಕಟ್ಟಬೇಕು, ಅದರಿಂದಲೇ ಆರ್ಥಿಕ ಸ್ಥಿತಿ ಬಲಗೊಳ್ಳುವುದು ಸಾಧ್ಯ ಎನ್ನುತ್ತಿದ್ದರು.
ದೇಶ ಅನಾಚೂನವಾಗಿ ಬೆಳೆದು ಬಂದದ್ದೇ ಗ್ರಾಮ ಸ್ವರಾಜ್ಯದ ಆಧಾರದ ಮೇಲೆ. ಲಕ್ಷಾಂತರ ಹಳ್ಳಿಗಳು ಉದ್ಧಾರವಾದರೆ ಮಾತ್ರ ದೇಶದ ಅಭಿವೃದ್ಧಿ  ಸಾಧ್ಯ ಎಂದು  ಹಿಂದಿನಿಂದಲೂ ಹೇಳಿಕೊಂಡು ಬಂದಿದ್ದರು. ಆದರೆ ನೆಹರೂ ಅವೆಲ್ಲವನ್ನೂ ತಿರಸ್ಕರಿಸಿದರು. ದೊಡ್ಡ ದೊಡ್ಡ ಯಂತ್ರಗಳು ಗೃಹಕೈಗಾರಿಕೆಗಳನ್ನು  ಮೀರಿ ಬೆಳೆಯಬೇಕು. ಆಗ ದೇಶದಲ್ಲಿ  ಹಣ ಸಂಗ್ರಹವಾಗುತ್ತದೆ. ಆ ಹಣ ಬಡವರಿಗೂ  ಸೇರುತ್ತದೆ ಎಂಬುದು ಅವರ ಲೆಕ್ಕಾಚಾರ. ದೇಶ ಸಾವಿರಾರು ವರ್ಷಗಳಿಂದ ಅನುಸರಿಸಿಕೊಂಡು ಬಂದ ಮಾರ್ಗವನ್ನೇ  ಈಗ ನೆಹರೂ …

ಯೋಜನೆಯ ಪಾಠವನ್ನು ನಾವೇ ಕಲಿಸಬೇಕು!

`ಬೆಂಗಳೂರಿಂದ ಹುಬ್ಬಳ್ಳಿಗೆ ಹೋಗೋ ರಸ್ತೆ ಚೆನ್ನಾಗಿದೆ. ಆದರೆ ಅಲ್ಲಲ್ಲಿ ರಸ್ತೆ ಪೂರ್ಣಗೊಳಿಸುವ ಕೆಲಸ ನಡೆಯುತ್ತಿದೆ’. ಹಾಗಂತ ಕಳೆದ ಏಳೆಂಟು ವರ್ಷಗಳಿಂದ ಹೆಳ್ತಿರೋದನ್ನು ಕೇಳಿದ್ದೇವೆ.ಬೆಂಗಳೂರು ಮೆಟ್ರೋ ಅಂತೂ ಮುಗಿಯುತ್ತಲೇಇಲ್ಲ.ಗುಲ್ಬರ್ಗಾದ ಅನೇಕ ರಸ್ತೆಗಳು ಜಲ್ಲಿಗಳ ಗುಡ್ಡೆಗಳಿಂದ ತುಂಬಿವೆಯೇ ಹೊರತು ರಸ್ತೆಯಾಗಿ ಮಾರ್ಪಟ್ಟಿಯೇ ಇಲ್ಲ. ಹೀಗೇಕೆ?
ಫ್ರಾನ್ಸಿಗೆ ಹೋಗಿ ಬಂದ ಅಂಕಣಕಾರ ಅಶೋಕ್ ದೇಸಾಯಿ ಅಲ್ಲಿನ ಕಂಪೆನಿಯೊಂದರ ಕೆಲಸ ಮಾಡುವ ರೀತಿನೀತಿಗಳನ್ನು ನೀಟಾಗಿ ವಿವರಿಸಿ ಬರೆದಿದ್ದಾರೆ. ಅಲ್ಲಿನ ಯಾವುದೇ ಕೆಲಸದ ಶುರು ಮಾಡುವ ಮುಂಚೆ ಮೊದಲ ಆದ್ಯತೆ ಪರಿಸ್ಠಿತಿ ಅಧ್ಯಯನಕ್ಕೆ ಎನ್ನುವುದನ್ನು ನಿರೂಪಿಸಿದ್ದಾರೆ. ಯಾವುದೇ ಕಾರ್ಯವನ್ನು ವಹಿಸಿಕೊಳ್ಳುವ ಕಂಪೆನಿ, ಅದರ ಅಧ್ಯಯನ ನಡೆಸಿ ಶ್ರೇಣಿ ನೀಡಿಕೊಳ್ಳುತ್ತದೆ. ಯೋಜನೆಯ ವ್ಯಾಪ್ತಿ, ತಾಂತ್ರಿಕ ಸಂಕೀರ್ಣತೆ, ಸಂಗ್ರಹ ಸೌಲಭ್ಯ ಮತ್ತು ಸ್ಥಳೀಯ ಅಗತ್ಯಗಳೆಂಬ ಆಧಾರದ ಮೇಲೆ ಒಂದರಿಂದ ಐದರವರೆಗೆ ಅಂಕ ನೀಡಿ, ಅದಕ್ಕೆ ತಕ್ಕಂತೆ ಯೋಜನೆ ರೂಪಿಸುತ್ತದೆ.
ಉದಾಹರಣೆಗೆ, ನೀರು ಮತ್ತು ವಿದ್ಯುತ್ ಸರಬರಾಜಿಗೆ ಮೂಲಸೌಕರ್ಯ ಭಾರಿಯಾಗಿಯೇ ಬೇಕಾಗುತ್ತದೆ. ಹೀಗಾಗಿ ಇದರ ವ್ಯಾಪ್ತಿ ಬಲು ದೊಡ್ಡದು. ದೂರಸಂಪರ್ಕ ಮತ್ತು ಆರೋಗ್ಯ ಉಸ್ತುವಾರಿಗೆ ಸಂಬಂಧಪಟ್ಟ ಯೋಜನೆಯಾದರೆ,ಅಲ್ಲಿ ತಂತ್ರಿಕತೆಗೆ ಮಹತ್ವ ಹೆಚ್ಚು. ಜಿಲ್ಲಾಡಳಿತ ಕಟ್ಟಡಗಳಿಗೆ,ಆರಕ್ಷಕ ಠಾಣೆಗಳಿಗೆ ಜನರಿಂದ ಹಣ ಸಂಗ್ರಹಿಸಲಾಗು…

ಮುಜಫ್ಫರ್‌ನಗರದಲ್ಲಿ ಮಿಡಿಯುವ ಮನ, ಕಾಶ್ಮೀರಿ ಪಂಡಿತರನ್ನೇಕೆ ಕರುಣೆಯಿಂದ ನೋಡುವುದಿಲ್ಲ?

Image
ಹೆಸರು: ಸರ್ವಾನಂದ ಕೌಲ್
ಸ್ಥಳ: ಶಾಲಿ, ಅನಂತ್‌ನಾಗ್ ಜಿಲ್ಲೆಯ ಒಂದು ಗ್ರಾಮ
ವೃತ್ತಿ: ನಿವೃತ್ತ ಶಿಕ್ಷಕ ಹಾಗೂ ಕಾಶ್ಮೀರಿ ಕವಿ
ಸರ್ವಾನಂದ್ ಕೌಲ್ ಅವರು "ಪ್ರೇಮಿ"ಯೆಂದೇ ಪ್ರಚಲಿತರಾಗಿದ್ದರು. ಜಮ್ಮು-ಕಾಶ್ಮೀರ ಶಿಕ್ಷಣ ಇಲಾಖೆಯಲ್ಲಿ 23 ವರ್ಷ ಸೇವೆ ಸಲ್ಲಿಸಿದ್ದ ಅವರದ್ದು ಕಾಶ್ಮೀರಿ ಸಾಹಿತ್ಯದಲ್ಲಿ ದೊಡ್ಡ ಹೆಸರು. ಕವಯತ್ರಿ ರೂಪಾ ಭವಾನಿಯವರ ಜೀವನಗಾಥೆ ಬರೆದಿದ್ದರು, ಸಂತ ಮಿರ್ಜಾ ಕಕ್ರ ಅವರ ಜೀವನಚರಿತ್ರೆ ರಚಿಸಿದ್ದರು. ಶ್ರೀಮದ್ ಭಗವದ್‌ಗೀತೆಯನ್ನು ಕಾಶ್ಮೀರಿಗೆ ಹಾಗೂ ಉರ್ದುಗೆ ಭಾಷಾಂತರ ಮಾಡಿದ ಹೆಗ್ಗಳಿಕೆ ಹೊಂದಿದ್ದರು. 1924ರಲ್ಲಿ ಜನಿಸಿದ್ದ ಅವರು ಮಹಾತ್ಮ ಗಾಂಧಿಯಿಂದ ಪ್ರಭಾವಿತರಾಗಿದ್ದರು ಹಾಗೂ ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲ್ಗೊಂಡಿದ್ದರು. 1947ರಲ್ಲಿ ಧರ್ಮದ ಆಧಾರದ ಮೇಲೆ ದೇಶ ವಿಭಜನೆಯಾದರೂ ಜಾತ್ಯತೀತತೆಯಲ್ಲಿ ಅಚಲ ನಂಬಿಕೆ ಹೊಂದಿದ್ದರು. ಅದಕ್ಕೆ ಉದಾಹರಣೆಯೆಂಬಂತೆ 1953ರಲ್ಲಿ ಶೇಖ್ ಅಬ್ದುಲ್ಲಾರನ್ನು ಬಂಧಿಸಿದಾಗ, 1963ರಲ್ಲಿ ಹಜರತ್ ಬಾಲ್ ಮಸೀದಿಯಿಂದ ಪ್ರವಾದಿ ಮೊಹಮ್ಮದರ ಪವಿತ್ರ ಕುರುಹು ಕಣ್ಮರೆಯಾದಾಗ, 1965ರಲ್ಲಿ ಪಾಕ್ ಆಕ್ರಮಣ ಮಾಡಿದಾಗ, 1967ರ ಪಂಡಿತರ ಪ್ರತಿಭಟನೆ ಸಂದರ್ಭದಲ್ಲಿ, 1968ರ ಅನಂತ್‌ನಾಗ್ ಕೋಮು ಹಿಂಸಾಚಾರದ ಸಂದರ್ಭದಲ್ಲಿ ಪ್ರೇಮಿ ಲೇಖನಿಯನ್ನು ಖಡ್ಗದಂತೆ ಝಳಪಿಸಿ ಪ್ರತಿಭಟಿಸಿದ್ದರು.
ಇತ್ತ 1965 ಹಾಗೂ 1971 ಸೋಲಿನ ನಂತರ ಪಾಕಿಸ್ತಾನ ಭಯೋತ್ಪಾದನೆಯ ಮೂಲಕ ಭಾರತವನ್ನು ಅಸ್ಥಿರಗೊಳ…

ಜನಸೇವೆಗೆ ರಾಜಕೀಯವೇ ಬೇಕಾಗಿಲ್ಲ, ಹೀಗೂ ಮಾಡಬಹುದು!

Image
ಬಿಹಾರ, ಪಾಟ್ನಾ!
ಹೀಗೆಂದ ತಕ್ಷಣ ನಮ್ಮ ಕಣ್ಮುಂದೆ ಲಾಲೂ ಪ್ರಸಾದ್ ಯಾದವ್, ರಾಬ್ಡಿದೇವಿಯ ಚಿತ್ರಗಳು ಬಂದು ನಿಲ್ಲುತ್ತವೆ. ಅದರ ಹಿಂದೆಯೇ, ಬಿಹಾರದ ರಾಜಕೀಯದಲ್ಲಿ ದೊಡ್ಡ ಹೆಸರು ಮಾಡಿರುವ ಕಳ್ಳರು, ಸುಳ್ಳರು, ಕೊಲೆಗಡುಕರು, ಕ್ರಿಮಿನಲ್‌ಗಳ ಮುಖಗಳೂ ಮೆರವಣಿಗೆ ಹೊರಡುತ್ತವೆ. ಇದೇ ಕಾರಣಕ್ಕೆ ಬಿಹಾರವನ್ನು ‘ಗೂಂಡಾರಾಜ್ಯ’ ಎಂದು ಕರೆಯುವ ಪರಿಪಾಠವೂ ಇದೆ. ಬಿಹಾರ ಅಂದ್ರೆ ಎಲ್ಲ ಅಕ್ರಮ, ಅವ್ಯವಹಾರಗಳಿಗೆ ಪರ್ಯಾಯ ಪದವೆನ್ನುವಂತಾಗಿದೆ. ಆದರೆ, ಈಗ ಅದೇ ಪಾಟ್ನಾದಿಂದ ದೇವರಂಥ ವ್ಯಕ್ತಿಯೊಬ್ಬ ಎದ್ದು ಬಂದಿದ್ದಾನೆ.
ಅವನ ಹೆಸರು ಆನಂದಕುಮಾರ್.
ಇವತ್ತು ಪಾಟ್ನಾದ ಬಸ್‌ನಿಲ್ದಾಣ ಅಥವಾ ರೈಲು ನಿಲ್ದಾಣದಲ್ಲಿ ನಿಂತು- ನಾಲ್ಕು ಮಂದಿಯ ಮುಂದೆ ಆನಂದಕುಮಾರ್ ಅಂದು ನೋಡಿ; ಜನ ಕಣ್ಣರಳಿಸುತ್ತಾರೆ. ನಿಂತಲ್ಲೇ ಕೈಮುಗಿಯುತ್ತಾರೆ. ‘ಓಹ್, ನಿಮ್ಗೆ ಮೇಷ್ಟ್ರು ಬೇಕಿತ್ತಾ’ ಎನ್ನುತ್ತಾರೆ. ಮರುಕ್ಷಣದಲ್ಲೇ ಈ ಆನಂದಕುಮಾರ್ ಅವರ ವಿಳಾಸವನ್ನು ಹೇಳುತ್ತಾರೆ. ಆನಂತರವೂ ಒಂದೆರಡು ನಿಮಿಷ ಅಲ್ಲಿಯೇ ನಿಂತರೆ- ಆನಂದಕುಮಾರ್ ಅವರನ್ನು ಹೊಗಳುತ್ತ ಹೊಗಳುತ್ತಾ ಮೈಮರೆಯುತ್ತಾರೆ.
ಸ್ವಾರಸ್ಯವೇನೆಂದರೆ- ಹೀಗೆ ಎಲ್ಲರಿಂದಲೂ ಹೊಗಳಿಸಿಕೊಳ್ಳುವ ಆನಂದಕುಮಾರ್ ರಾಜಕಾರಣಿಯಲ್ಲ. ಹಣವಂತನಲ್ಲ. ಯೋಗ ಗುರುವಲ್ಲ. ಚಿತ್ರನಟನಲ್ಲ. ರಾಬ್ಡಿದೇವಿಯ ಮಾವನಲ್ಲ. ಲಾಲೂ ಪ್ರಸಾದನಿಗೂ ಅವನಿಗೂ ಸಂಬಂಧವಿಲ್ಲ. ನಿತೀಶ್‌ಕುಮಾರನ ನೆಂಟನೂ ಅಲ್ಲ.  ಅಸಲಿಗೆ, ರಾಜಕೀಯದ ನೆರಳನ್ನು ಆ…

ದುಡ್ಡಿದ್ದೋರೆಲ್ಲ ಜುಗ್ಗರಲ್ಲ, ಖರ್ಚು ಮಾಡುವವರೆಲ್ಲ ಶ್ರೀಮಂತರಲ್ಲ!

Image
ಒಮ್ಮೆ ಧೀರೂಭಾಯಿ ಅಂಬಾನಿ ಪಂಚತಾರಾ ಹೋಟೆಲ್ ಗೆ ಹೋಗಿದ್ದರಂತೆ. ವೇಟರ್ ಮೆನು ಕಾರ್ಡ್ ತಂದಿಟ್ಟನಂತೆ. ಅಂಬಾನಿ ಎಲ್ಲ ಐಟಮ್್ಗಳ ರೇಟುಗಳನ್ನು ಗಮನಿಸಿದರಂತೆ. ಯಾವ ಆಹಾರ ಪದಾರ್ಥಗಳ ಬೆಲೆಯೂ ಐನೂರು ರುಪಾಯಿಗಳಿಗಿಂತ ಕಡಿಮೆ ಇರಲಿಲ್ಲ. ಒಂದು ಕಪ್ ಚಹದ ಬೆಲೆ ಆರು ನೂರು ರುಪಾಯಿ ಎಂದು ಬರೆದಿತ್ತು. ಒಂದು ಚಪಾತಿ ಮತ್ತು ರೊಟ್ಟಿಗೆ ತಲಾ ನೂರೈವತ್ತು ರುಪಾಯಿ!
ಹೊಟ್ಟೆ ಹಸಿದಿತ್ತು. ಹಾಗಂತ ಕಿಸೆಯಲ್ಲಿ ಹಣ ಇರಲಿಲ್ಲ ಅಂತ ಅಲ್ಲ. ಸಾವಿರಾರು ಕೋಟಿ ರುಪಾಯಿಗಳ ಶ್ರೀಮಂತ. ಆದರೆ, ಜತೆಯಲ್ಲಿ ಯಾರೂ ಇರಲಿಲ್ಲ. ಯಾವ ಪ್ರತಿಷ್ಠೆ ಮೆರೆಯಬೇಕೂಂತ ಅಷ್ಟೆಲ್ಲ ಹಣ ಕೊಡಬೇಕು. ಇಷ್ಟೇ ಹಣದಲ್ಲಿ ವರ್ಷವಿಡೀ ಉಣಬಹುದಲ್ಲ, ಒಂದು ಕಪ್ ಚಹಕ್ಕೆ ಐನೂರು ರುಪಾಯಿ ಕೊಡುವುದಂದರೇನು, ವರ್ಷವಿಡೀ ಚಹ ಕುಡಿಯಬಹುದಲ್ಲ….
ಹೀಗೆಲ್ಲ ಯೋಚಿಸಿದ ಅಂಬಾನಿ ಹಿಂದೆ ಮುಂದೆ ನೋಡದೇ, ಹೋಟೆಲ್ ವೇಟರ ಮತ್ತು ಸುತ್ತಲಿನವರ ಪ್ರತಿಕ್ರಿಯೆಗೂ ಕಾಯದೇ ಹೊರ ನಡೆದು, ರಸ್ತೆ ಬದಿಯಲ್ಲಿ ತಮ್ಮ ಕಾರನ್ನು ನಿಲ್ಲಿಸಿ, ಹತ್ತು ರುಪಾಯಿಗೆ ಹೊಟ್ಟೆ ತುಂಬಾ ಊಟ ಮಾಡಿದರಂತೆ.
ಈ ಘಟನೆ ಬಗ್ಗೆ ಅಂಬಾನಿ ಹೀಗೆ ಹೇಳಿದರಂತೆ- “ನಾನು ಸ್ಟಾರ್ ಹೋಟೆಲ್ ಗಳಿಗೆ ಹೋಗಿಲ್ಲ ಅಂತಲ್ಲ. ಸಾಕಷ್ಟು ಸಲ ಹೋಗಿದ್ದೇನೆ. ನಮ್ಮ ಕಂಪನಿಯ ಹಲವಾರು ಔತಣಕೂಟಗಳನ್ನು ಅಲ್ಲಿ ಆಯೋಜಿಸಿದ್ದೇನೆ. ಅವೆಲ್ಲ ಅನಿವಾರ್ಯ. ಆದರೆ ನಾನೊಬ್ಬನೇ ಎಂದೂ ಅಲ್ಲಿಗೆ ಹೋಗಿ ಊಟ ಮಾಡಿಲ್ಲ. ಅಗತ್ಯ ಮತ್ತು ಅವಶ್ಯಕತೆ ಇದ್ದರೆ ಖರ್ಚು ಮಾಡಬಹುದು. ಹತ…

ಜಗತ್ತನ್ನೇ ಜಯಿಸಿದವ ಅವನ ಮುಂದೆ ಸಣ್ಣವನಾಗಿದ್ದ!

ಕಳೆದ ಕೆಲ ದಿನಗಳಿಂದ ಈ ಪ್ರಸಂಗ ಬಿಟ್ಟೂ ಬಿಡದೇ ನೆನಪಾಗುತ್ತಿದೆ. ಅಲೆಕ್ಸಾಂಡರ್್ನ ಜೀವನದಲ್ಲಿ ನಡೆದ ಘಟನೆಯಿದು. ಅದ್ಯಾಕೆ ಈ ಸಂದರ್ಭದಲ್ಲಿ ನೆನಪಾಗುತ್ತಿದೆ?
ಅಲೆಕ್ಸಾಂಡರ್ ನಿಧನನಾಗಿದ್ದ. ಆತನ ಪಾರ್ಥಿವ ಶರೀರವನ್ನು ಶವದ ಪೆಟ್ಟಿಗೆಯಲ್ಲಿ ಇಡಲಾಗಿತ್ತು. ಇಡೀ ಜಗತನ್ನು ಜಯಿಸುವೆ ಎಂದು ಬೀಗುತ್ತಿದ್ದ ಮತ್ತು ಆ ದಿಸೆಯಲ್ಲಿ ತುಸು ಯಶಸ್ವಿಯೂ ಆದ ಪರಮ ಪರಾಕ್ರಮಿಯ ತಣ್ಣನೆಯ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಅಲೆಕ್ಸಾಂಡರ್ ಅಂದ್ರೆ ಭೌತಿಕ ಉಪಭೋಗದ ಸಂಕೇತ. ಅತ್ಯುತ್ತಮವಾದುದು ಏನೇ ಕಾಣಲಿ, ಅದು ತನಗಿರಲಿ ಎಂದು ಹಪಹಪಿಸುವ ಮನಸ್ಸು ಅವನದು. ಅವನ ಆ ದಾಹಕ್ಕೆ ಅಂತ್ಯವೇ ಇರಲಿಲ್ಲ. ಪ್ರದೇಶ, ದೇಶ, ಉಪಖಂಡ, ಖಂಡಗಳನ್ನು ಒಂದಾದ ನಂತರ ಒಂದರಂತೆ ಗೆಲ್ಲುತ್ತಾ ಹೋದರೂ ಅವನ ಈ ಗೆಲ್ಲುವ, ಸಮರ ಸಾರುವ, ದೇಶವನ್ನು ಕೊಳ್ಳೆ ಹೊಡೆಯುವ ಹುಚ್ಚು ಕೋಡಿ ಮಾತ್ರ ಭೋರ್ಗರೆಯುತ್ತ ಹರಿಯುತ್ತಲೇ ಇತ್ತು. ಜಗತ್ತನ್ನೇ ಜಯಿಸಲು ಹೊರಟವನಿಗೆ ದೇಶ, ಖಂಡಗಳೆಲ್ಲ ಯಾವ ಲೆಕ್ಕ?
ಅಲೆಕ್ಸಾಂಡರ್್ನ ಶವ ತಣ್ಣಗೆ ಮಲಗಿತ್ತು…!
ಬಹಳ ವರ್ಷಗಳ ಕಾಲ ಅವನ ಸಹಾಯಕನಾಗಿದ್ದವ ಪಾರ್ಥೀವ ಶರೀರದ ಹತ್ತಿರ ಬಂದವನೇ ಶವದ ಪೆಟ್ಟಿಗೆಯನ್ನು ತಬ್ಬಿಕೊಂಡು ರೋಧಿಸಲಾರಂಭಿಸಿದ. ಅವನ ಸುತ್ತಲಿದ್ದವರು ಸಹ ಆ ಕರುಣಾಜನಕ ದೃಶ್ಯಕ್ಕೆ ಮೂಕಸಾಕ್ಷಿಗಳಾಗುತ್ತಾ ಕಣ್ಣೀರು ಸುರಿಸಿದರು. ಇನ್ನೇನು ಪಾರ್ಥೀವ ಶರೀರವನ್ನಿಟ್ಟ ಪೆಟ್ಟಿಗೆಯನ್ನು ಮೇಲೆತ್ತಿಕೊಂಡು ಅಂತ್ಯ ಸಂಸ್ಕಾರಕ್ಕೆ ಅ…

ಮಕ್ಕಳ ಮೋಹದ ಮುಂದೆ ಯಾವ ಆಸ್ತಿಯೂ ದೊಡ್ಡದಲ್ಲ…!

ಮಕ್ಕಳ ಮೇಲೆ ತಾಯ್ತಂದೆಯರು ಹೊಂದಿರುವ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ನಿಜ ಹೇಳಬೇಕೆಂದರೆ, ಮಕ್ಕಳ ಹೊರತಾಗಿ ಪೋಷಕರಿಗೆ ಬೇರೊಂದು ಜಗತ್ತೇ ಇರುವುದಿಲ್ಲ. ಒಬ್ಬ ವ್ಯಕ್ತಿ ದಿನಕ್ಕೆ ಕೋಟಿ ಕೋಟಿ ದುಡಿಯುವವನಾಗಿರಬಹುದು. ಅಥವಾ ಭಿಕ್ಷೆ ಯಾಚಿಸುತ್ತಾ ಹೊಟ್ಟೆ ಹೊರೆಯುವವನೇ ಆಗಿರಬಹುದು. ಈ ಎರಡೂ ವರ್ಗಕ್ಕೆ ಸೇರಿದ ಜನರಿಗೆ ಅಷ್ಟೈಶ್ವರ್ಯ ಕಂಡಾಗ ಆಗುತ್ತದಲ್ಲ, ಅದಕ್ಕಿಂತ ಹೆಚ್ಚಿನ ಖುಷಿ ಮಕ್ಕಳನ್ನು ಕಂಡಾಗ ಆಗುತ್ತದೆ. ಪ್ರತಿಯೊಬ್ಬ ಪೋಷಕರ ಕನಸು ಹಾಗೂ ಭವಿಷ್ಯದ ಲೆಕ್ಕಾಚಾರದಲ್ಲಿ ಮಕ್ಕಳೇ ಇರುತ್ತಾರೆ. ಮಕ್ಕಳು ತಮ್ಮ ಕೊನೆಗಾಲದಲ್ಲಿ ಹೇಗೆಲ್ಲಾ ಆಸರೆಯಾಗಬಹುದು ಎಂದು ಕನಸು ಕಾಣದ ಪೋಷಕರೇ ಇಲ್ಲ ಎನ್ನಬಹುದು. ಆದರೆ ಕಂಡ ಕನಸುಗಳೆಲ್ಲ ನನಸಾಗುವುದಿಲ್ಲ. ಒಂದೊಂದು ಸಂದರ್ಭದಲ್ಲಿ ಪೋಷಕರನ್ನು ಅವರ ಕಡೆಗಾಲದಲ್ಲಿ ಪ್ರೀತಿಯಿಂದ ಜೋಪಾನ ಮಾಡಬೇಕು ಎಂದು ಮಕ್ಕಳೂ ಆಸೆಪಟ್ಟಿರುತ್ತಾರೆ. ಆದರೆ ಅದಕ್ಕೆ ವಿಧಿ ಎಂಬುದು ಅವಕಾಶ ಮಾಡಿಕೊಡುವುದಿಲ್ಲ. ಇಂಥ ಸಂದರ್ಭದಲ್ಲಿ ಪೋಷಕರಿಗೆ ಉಂಟಾಗುವ ಆಘಾತ ಹಾಗೂ ಮಕ್ಕಳ ವಿಷಯದಲ್ಲಿ ಅವರು ಹೊಂದಿದ ಆದಮ್ಯ ಪ್ರೀತಿಗೆ ಸಾಕ್ಷಿ ಹೇಳುವ ಕಥೆಯೊಂದು ಇಲ್ಲಿದೆ:
>>>>>>>
ಅವನ ಪೂರ್ತಿ ಹೆಸರು ಗಣಾಚಾರಿ. ಜನ ಅವನನ್ನು ‘ಆಚಾರ್ರೇ’ ಎಂದು ಕರೆಯುತ್ತಿದ್ದರು. ಈ ಗಣಾಚಾರಿ, ಶಿಲ್ಪ ಕಲಾವಿದ. ಬಗೆಬಗೆಯ ಮೂರ್ತಿಗಳನ್ನು ಕೆತ್ತುವುದು, ಹಳೆಯ ವಿಗ್ರಹಗಳನ್ನು ಸಂಗ್ರಹಿಸಿ ಮಾರುವುದು ಅವನ ಕಸುಬಾ…

ಕತೆಗಳ ತೋರಣ ಕಟ್ಟಿಡಲು ಬೇಕೇ ಇಲ್ಲ ಕಾರಣ...

ಬಾಲ್ಯದಲ್ಲಿ ಅಜ್ಜಿ ಕತೆಗಳನ್ನು ಕೇಳಿಕೊಂಡು ಬೆಳೆದವರು ಆ ದಿನಗಳ ಮಧುರಾನುಭೂತಿಯನ್ನು ಮತ್ತೆ ಮತ್ತೆ ನೆನಪು ಮಾಡಿಕೊಳ್ಳುತ್ತಾರೆ. ಕಾರಣ, ಆ ಕಥೆಗಳಲ್ಲಿ ಎಲ್ಲ ಪಾತ್ರಗಳೂ ಮಾತಾಡುತ್ತಿದ್ದವು! ಪ್ರತಿಯೊಂದು ಕತೆಯಲ್ಲೂ ನೀತಿಯಿರುತ್ತಿತ್ತು, ಪಾಠವಿರುತ್ತಿತ್ತು, ತಮಾಷೆ ಇರುತ್ತಿತ್ತು, ಸಸ್ಪೆನ್ಸ್ ಇರುತ್ತಿತ್ತು. ಒಂದೊಂದು ಸಂದರ್ಭದಲ್ಲಿ ಕತೆ-ಜೋಗುಳದಂತೆಯೂ ಕೇಳಿಸುತ್ತಿತ್ತು. ಎಷ್ಟೋ ಸಂದರ್ಭಗಳಲ್ಲಿ ಮಕ್ಕಳು- ಹೂಂ, ಆಮೇಲೆ ಎಂದು ಪ್ರಶ್ನಿಸದಿದ್ದರೆ ಅಜ್ಜಿ ಕತೆಯನ್ನು ಮುಂದುವರಿಸುತ್ತಲೇ ಇರಲಿಲ್ಲ. ಆಗ ಅಜ್ಜಿ-ಮೊಮ್ಮಗ ಸಣ್ಣಗೆ ದುಸುಮುಸುಮಾಡಿ ರಾಜಿಯಾಗುತ್ತಿದ್ದರು. ಕತೆ ಮುಂದುವರಿಯುತ್ತಿತ್ತು…
ಈಗ, ಕತೆ ಕೇಳುವ ಹಂಬಲ ಎಲ್ಲರಿಗೂ ಇದೆ. ಆದರೆ ಹೇಳಲು ಅಜ್ಜಿಯರೇ ಇಲ್ಲ. ಅದನ್ನೆಲ್ಲ ನೆನಪು ಮಾಡಿಕೊಂಡಾಗಲೇ ಮನದಲ್ಲಿ ಅರಳಿಕೊಂಡ ಕತೆಗಳಿವೆ. ಇನ್ನು ಮುಂದೆ ನೀವುಂಟು, ಈ ಕಥೆಗಳುಂಟು…
>>>>>>
ಒಂದು ಮನೆ ಬಹಳ ದಿನಗಳಿಂದ ಖಾಲಿ ಉಳಿದಿತ್ತು. ಕಡೆಗೂ ಅಲ್ಲಿಗೆ ಬಾಡಿಗೆದಾರರೊಬ್ಬರು ಬಂದರು. ಈ ಬಾಡಿಗೆ ಮನೆಯ ಎದುರಿನಲ್ಲಿದ್ದ ಮನೆಯಲ್ಲಿ ಒಂದು ಕುಟುಂಬ ವಾಸವಿತ್ತು. ಈ ಮನೆಯ ಹೆಂಗಸಿಗೆ ಸದಾ ಬೇರೆಯವರ ಹುಳುಕು ತೋರಿಸುವ ಅಭ್ಯಾಸವಿತ್ತು. ಯಾರು ಎಷ್ಟೇ ಶುಚಿಯಾಗಿದ್ದರೂ ಆಕೆ ಏನಾದರೂ ಒಂದು ತಪ್ಪು ತೋರಿಸಿ ಬಿಡುತ್ತಿದ್ದಳು.
ಅವತ್ತು, ಈ ಹೆಂಗಸು ಮನೆಯ ಹಾಲ್್ನಲ್ಲಿ ಕೂತು ಗಂಡನೊಂದಿಗೆ ತಿಂಡಿ ತಿನ್ನುತ್ತಿದ್ದಳು. ಆಗಲೇ ಹೊ…

ಎಲ್ಲರ ಬದುಕಿನಲ್ಲೂ ದೇವರಂತೆ ಯಾರಾದರೂ ಬಂದೇ ಬರುತ್ತಾರೆ!

ತುಂಬ ಕಷ್ಟದ ಸಂದರ್ಭ ಎದುರಿಗಿದ್ದಾಗ, ತೀರಾ ಆಕಸ್ಮಿಕವಾಗಿ ಯಾರೋ ಒಬ್ಬರು ನೆರವಿಗೆ ಬರುತ್ತಾರೆ. ಅದನ್ನು ನೆನಪಿಸಿಕೊಂಡು ನಾವೆಲ್ಲ-’ದೇವರ ರೂಪದಲ್ಲಿ ಬಂದು ನಮ್ಮನ್ನು ಕಾಪಾಡಿಬಿಟ್ಟಿರಿ’ ಎಂದು ಉದ್ಗರಿಸಿರುತ್ತೇವೆ. ವಾಸ್ತವ ಏನೆಂದರೆ, ಬೇರೊಬ್ಬರ ಪಾಲಿಗೆ ದೇವರ ರೂಪದಲ್ಲಿ ನೆರವಾಗುವಂಥ ಸಂದರ್ಭಗಳು ಎಲ್ಲರ ಬದುಕಿನಲ್ಲೂ ಒಂದಲ್ಲ ಒಂದು ಸಂದರ್ಭದಲ್ಲಿ ಬಂದೇ ಬರುತ್ತದೆ. ಈ ಮಾತಿಗೆ ಸಾಕ್ಷಿಯಾಗುವಂಥ ಹೃದ್ಯ ಪ್ರಸಂಗವೊಂದನ್ನು ಓದುಗ ನಿಮಗೆ ಹೇಳಲೇಬೇಕು ಎನಿಸುತ್ತಿದೆ. ಖಂಡಿತವಾಗಿಯೂ ಇದು ನಿಮಗೆ ಇಷ್ಟವಾಗುತ್ತದೆ.
ಆ ಸೇನಾ ತುಕಡಿಯಲ್ಲಿ ಹದಿನೈದು ಮಂದಿ ಯೋಧರಿದ್ದರು. ಅವರಿಗೆ ನಾಯಕನಾಗಿ ಒಬ್ಬ ಮೇಜರ್ ಇದ್ದ. ಆತ ಎರಡು ಯುದ್ಧಗಳಲ್ಲಿ ಪಾಲ್ಗೊಂಡಿದ್ದ, ಎರಡು ಬಾರಿಯೂ ಗೆಲುವಿನ ಸವಿ ಕಂಡಿದ್ದ ಅನುಭವಿ. ಅವನ ಮುಂದಾಳತ್ವದ ತಂಡವನ್ನು ಹಿಮಾಲಯದ ತಪ್ಪಲಿನಲ್ಲಿ ಸೇವೆಗೆ ನಿಯೋಜಿಸಲಾಗಿತ್ತು. ಮೂರು ತಿಂಗಳ ಸುದೀರ್ಘ ಅವಧಿಯವರೆಗೂ ಆ ಗಡಿ ಪ್ರದೇಶದಲ್ಲಿ ತುಂಬ ಎಚ್ಚರದಿಂದ ಪಹರೆ ಕಾಯುವ ಕೆಲಸ ಈ ಸೇನಾ ತುಕಡಿಯ ಯೋಧರದ್ದಾಗಿತ್ತು. ಪಹರೆ ಕಾಯಬೇಕಿದ್ದ ಜಾಗಕ್ಕೆ ವಾಹನ ಸೌಲಭ್ಯವಿರಲಿಲ್ಲ. ಸೇನೆಯ ವಾಹನ ಇಳಿದ ನಂತರ 18 ಕಿಲೋಮೀಟರ್ ದೂರವನ್ನು ನಡೆದೇ ಕ್ರಮಿಸಬೇಕಿತ್ತು. ಈ ಹೊಸದೊಂದು ತುಕಡಿ ಕರ್ತವ್ಯ ನಿರ್ವಹಿಸಲು ಬರುತ್ತಿದೆ ಎಂಬ ಸುದ್ದಿ ತಿಳಿದು ಈಗಾಗಲೇ ಹಿಮಾಲಯದ ತಪ್ಪಲಿನಲ್ಲಿ ಕಾವಲಿಗೆ ನಿಂತಿದ್ದ ಯೋಧರು ಖುಷಿಯಾಗಿದ್ದರು. ಹೊಸ ತಂಡ ಅಲ್ಲಿಗೆ ತಲ…

ದೇವರ ಮೇಲೆ ನಂಬಿಕೆ ಇದ್ದರೆ ತರ್ಕವನ್ನು ಗೌರವಿಸಬಾರದಾ?

ಬಾಳಿಗೊಂದು ನಂಬಿಕೆ ಇರಬೇಕು ಖರೆ. ಆ ಬಗ್ಗೆ ದೂಸರಾ ಮಾತೇ ಇಲ್ಲ. ಆದರೆ ನಾವು ಭಾರತೀಯರ ಮೇಲೆ ಒಂದು ಆರೋಪವಿದೆ. ಅದೆಂದರೆ, ನಮಗೆ ವೈಜ್ಞಾನಿಕ ಮನೋಭಾವ ಇಲ್ಲ ಅನ್ನೋದು. ಅಂದರೆ ನಾವೇನೋ ವಿಜ್ಞಾನ ಕ್ಷೇತ್ರದಲ್ಲಿ ಭಾರಿ ಹಿಂದುಳಿದುಬಿಟ್ಟಿದ್ದೇವೆ, ತಂತ್ರಜ್ಞಾನದಲ್ಲಿ ನಾವು ಗ್ರೇಸ್್ಮಾರ್ಕ್ ಪಡೆಯುವುದಕ್ಕೂ ತಡಬಡಾಯಿಸುತ್ತಿದ್ದೇವೆ ಎಂಬ ಚಿಂತನೆಯ ಮುನ್ನುಡಿಯೇನೂ ಇದಲ್ಲ. ಬದಲಿಗೆ ನಮ್ಮ ನಿತ್ಯಜೀವನದಲ್ಲಿ ನಾವು ವರ್ತಿಸುತ್ತಿರುವ ರೀತಿ-ನೀತಿ ಎಂಥಾದ್ದು ಎಂಬುದನ್ನು ಗಮನಕ್ಕೆ ತೆಗೆದುಕೊಂಡಾಗ ನಮ್ಮಲ್ಲಿ ವೈಜ್ಞಾನಿಕ ಮನೋಭಾವ ಕಮ್ಮಿ ಇದೆ ಎಂಬುದನ್ನು ಬಡಪೆಟ್ಟಿಗೆ ತಳ್ಳಿಹಾಕಲಿಕ್ಕಾಗುವುದಿಲ್ಲ.
ನಾವು ಕರಾರುವಾಕ್ಕಾಗಿ ಒಂದು ಯೋಚನಾ ಧಾಟಿಯನ್ನು ರೂಢಿಸಿಕೊಳ್ಳುವುದರಲ್ಲಿ ಹಿಂದೆ ಬಿದ್ದವರು. ಸಾವಿರಾರು ವರ್ಷಗಳಿಂದ ಯಾವುದನ್ನೋ ಮಾಡಿಕೊಂಡು ಬರಲಾಗುತ್ತಿದೆ ಎಂಬ ಕಾರಣಕ್ಕೆ ಅದನ್ನೇ ಮುಂದುವರಿಸಿಕೊಂಡು ಹೋಗುವ ನಮಗೆ ಅದರ ಕಾರಣವನ್ನು ಕೆದಕುವ, ಪ್ರಸ್ತುತತೆ ಇದೆಯಾ ಎಂದು ತರ್ಕಿಸುವ ಗುಣಗಳೇ ಇಲ್ಲ. ನಮ್ಮ ದೇಶ ವೈವಿಧ್ಯದ ಗೂಡು ಹಾಗೂ ಶ್ರೇಷ್ಠತೆಯ ನೆಲ. ತನ್ನಲ್ಲಿ ಅಸಾಧಾರಣ ಸಾಮರ್ಥ್ಯವನ್ನು ಹಿಡಿದಿಟ್ಟುಕೊಂಡಿರುವ ರಾಷ್ಟ್ರವಿದು. ಇದನ್ನು ನಾವು ಸರಿಯಾಗಿ ಬಳಸಿಕೊಂಡಿದ್ದೇ ಆದರೆ ನಮ್ಮ ಜೀವನದ ಗುಣಮಟ್ಟ ಹಾಗೂ ಬದುಕಿನ ಎಲ್ಲ ಆಯಾಮಗಳಲ್ಲಿ ಉತ್ಪಾದಕತೆ ಹೆಚ್ಚುವುದರಲ್ಲಿ ಸಂಶಯವಿಲ್ಲ. ಆದರೆ ಇವೆಲ್ಲ ಸಾಕಾರವಾಗಬೇಕು ಎಂದಾದರೆ ಮೂಲಭೂತವಾಗಿ ನಮ್ಮಲ…

ಯಶಸ್ಸು ಗಳಿಸುವುದು ಕಷ್ಟವಲ್ಲ, ಆದರೆ ಇಟ್ಟುಕೊಳ್ಳುವುದು!

ಅನೇಕ ಮಂದಿ ಜೀವನದಲ್ಲಿ ಎಡವುತ್ತಾರೆ, ಸೋಲುತ್ತಾರೆ. ಹಾಗೆಂದು ಇವರು ಸಾಮಾನ್ಯರಲ್ಲ. ಅವರವರ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮೆರೆದವರೇ. ಯಶಸ್ಸಿನ ನೆತ್ತಿ ಮೇಲೆ ಗುದ್ದಿ ಗೆಲುವನ್ನು ಎದೆಗವಚಿಕೊಂಡವರೇ. ಇಂಥ ಯಶಸ್ವಿ ವ್ಯಕ್ತಿಗಳು ವೈಯಕ್ತಿಕ ಜೀವನದಲ್ಲಿ ಮುಗ್ಗರಿಸುತ್ತಾರೆ. ಬಾಳನ್ನು ಗಾಳುಮೇಳಾಗಿಸಿಕೊಂಡು ತೊಳಲಾಡುತ್ತಾರೆ. ಇಂಥವರ ಬಹಳ ದೊಡ್ಡ ದುರಂತವೇನೆಂದರೆ ಇವರಿಗೆ ತಮಗೆ ಒದಗಿ ಬಂದ ಯಶಸ್ಸನ್ನು ಹೇಗೆ ನಿಭಾಯಿಸಬೇಕೆಂಬುದು ಗೊತ್ತಿಲ್ಲದಿರುವುದು. ಯಶಸ್ಸೇ ಅವರಿಗೆ ಮುಳುವಾಗಿರುತ್ತದೆ. ಯಶಸ್ಸನ್ನು ಹೇಗೆ ಇಟ್ಟುಕೊಳ್ಳಬೇಕೆಂದು ಗೊತ್ತಿಲ್ಲದೇ, ತಲೆಯ ಕಿರೀಟವೇ ಭಾರವಾದಂತಾಗಿ ಇನ್ನಿಲ್ಲದ ಸಮಸ್ಯೆಗೆ ಈಡುಮಾಡಿಕೊಳ್ಳುತ್ತಾರೆ. ಹೀಗಾಗಿ ಯಶಸ್ಸು ಗಳಿಸಿ ಸೆಲಬ್ರೆಟಿಯಾದಷ್ಟೇ ಬೇಗ ನೇಪಥ್ಯಕ್ಕೆ ಸರಿದು ಬಿಡುತ್ತಾರೆ. ಯಶಸ್ಸು ಗಳಿಸುವುದು ಕಷ್ಟವಲ್ಲ. ಆದರೆ ಗಳಿಸಿದ ಯಶಸ್ಸನ್ನು ಇಟ್ಟುಕೊಳ್ಳುವುದಿದೆಯಲ್ಲ, ಅದು ಬಹಳ ಕಷ್ಟ. ಬೇಕಾದರೆ ನೋಡಿ, ಇದು ಸರಳ ಸಂಗತಿ ಎಂದೆನಿಸಬಹುದು. ಆದರೆ ಅನೇಕರ ಹೋರಾಟ ಇದರ ಬಗ್ಗೆಯೇ ನಡೆದಿರುತ್ತದೆ. ಯಶಸ್ಸು ಗಳಿಸಲು ಹಗಲಿರುಳು, ನಿದ್ದೆಗೆಟ್ಟು ದುಡಿಯುತ್ತಾರೆ. ಕೊನೆಗೆ ಅದನ್ನು ಇಟ್ಟುಕೊಳ್ಳಲು ಹಗಲಿರುಳು, ನಿದ್ದೆ ಬಿಟ್ಟು ದುಡಿಯುತ್ತಾರೆ. ಕೆಲವೇ ಕೆಲವು ಮಂದಿ ಎರಡರಲ್ಲೂ ಜಯಶಾಲಿಗಳಾಗುತ್ತಾರೆ. ಉಳಿದವರಿಗೇ ಯಶಸ್ಸೇ ಮುಳುವಾಗುತ್ತದೆ. ಹೀಗಾಗಿ ಯಶಸ್ಸಿನ ಭಾರಕ್ಕೆ ಕುಸಿಯುತ್ತಾರೆ.

ಇದರ ಬಗ್ಗೆಯೇ ಹೇಳಬೇಕ…

ಗೆಲುವು ಆಕಸ್ಮಿಕವಾಗುವ ಬದಲು ಚಟವಾಗಲಿ!

ನೀವು ಯಾವುದೇ ಹೊಸ ಸಾಹಸಕ್ಕೆ ಅಣಿಯಾಗಿ, ನಿಮ್ಮ ಸ್ನೇಹಿತರ ಮುಂದೋ, ಸಂಬಂಧಿಕರ ಮುಂದೋ ನಿಮ್ಮ ಕನಸಿನ ಯೋಜನೆಯನ್ನು ಹಂಚಿಕೊಳ್ಳಿ. ಯಾರೂ ಅದನ್ನು ಪ್ರೋತ್ಸಾಹಿಸುವುದಿಲ್ಲ.  ‘ಎಲ್ಲಾ ಬಿಟ್ಟ ಬಂಗಿ ನೆಟ್ಟ ಅನ್ನೋ ಹಾಗೆ ಆಯ್ತಲ್ಲಾ? ನಿನ್ನ ಪಾಡಿಗೆ ನೀನು ಸುಮ್ಮನಿರಬಾರದಾ? ಅಂಥ ಸಾಹಸ ಮಾಡಿ ಯಾರೂ ಉದ್ಧಾರ ಆಗಿಲ್ಲ.’ ಅಂತಾನೇ ಎಲ್ಲರೂ ಹೇಳೋದು. ‘ಇದು ಗ್ರೇಟ್ ಐಡಿಯಾ, ಮುನ್ನುಗ್ಗು’ ಅಂತ ಯಾರೂ ಹೇಳುವುದಿಲ್ಲ.
ಇನ್ನು ಕೆಲವರು ಹೊಸ ಸಾಹಸಕ್ಕೇನೋ ಅಣಿಯಾಗುತ್ತಾರೆ. ಆದರೆ ಬೇರೆಯವರು ನಡೆದ ಹಾದಿಯಲ್ಲೇ ನಡೆಯುತ್ತಾರೆ. ಹೊಸ ಮಾರ್ಗ ಅರಸಲು, ಎಲ್ಲರೂ ತುಳಿದ ಹಾದಿ ಬಿಟ್ಟು ತಮ್ಮದೇ ದಾರಿ ನಿರ್ಮಿಸಲು ಬಯಸುವುದಿಲ್ಲ. ಅಂದರೆ ಹೊಸತಾಗಿ ಏನನ್ನೂ ಯೋಚಿಸುವುದಿಲ್ಲ. ಎಲ್ಲರೂ ದರ್ಶಿನಿ ಆರಂಭಿಸಿದರೆ ಇವರೂ ದರ್ಶಿನಿಯನ್ನೇ ತೆರೆಯುತ್ತಾರೆ. ಎಲ್ಲರೂ ಮಾಲ್ ಅನ್ನು ಕಟ್ಟಿದರೆ ಇವರೂ ಅದನ್ನೇ ಕಟ್ಟುತ್ತಾರೆ. ಯಾರೋ ಒಂದು ರೀತಿಯ ಸಿನಿಮಾ ನಿರ್ಮಿಸಿದರೆ ಇವರೂ ಅಂಥದೇ ಸಿನಿಮಾ ನಿರ್ಮಿಸುತ್ತಾರೆ. ಈ ಮಾತನ್ನು ಎಲ್ಲ ಕ್ಷೇತ್ರಗಳಿಗೂ ಅನ್ವಯಿಸಬಹುದು. ಹೊಸತಾಗಿ ಯೋಚಿಸುವವರು ಮಾತ್ರ ಅಚ್ಚರಿ, ಸೋಜಿಗವನ್ನುಂಟು ಮಾಡಲು ಸಾಧ್ಯ. ಹೊಸ ದಾರಿ ಅರಸುವವರು ಹೊಸ ನೋಟವನ್ನು, ಹೊಸ ಊರನ್ನು ಕಾಣಲು ಸಾಧ್ಯ.
ಇದನ್ನು ಮಾಡದವರು ಜೀವನದಲ್ಲಿ ನಕಲು ಮಾಡುತ್ತಾರೆ, ಕಾಪಿ-ಪೇಸ್ಟ್ ಮಾಡುತ್ತಾರೆ, ಬೇರೆಯವರು ಹೋದ ದಾರಿಯಲ್ಲಿಯೇ ನಡೆಯುತ್ತಾರೆ. ಇಂಥವರು ಇದ್ದದ್ದನ್ನು ಮುನ್ನಡೆಸಿಕೊಂ…

ಎಲ್ಲ ಸಮಸ್ಯೆಗಳಿಗೂ ಪರಿಹಾರದ ಪಾಠ ಹೇಳುತ್ತದೆ ಪ್ರಕೃತಿ!

Go back to nature!
ಹಾಗಂತ ಹೇಳಿದವನು ಆಪಲ್ ಕಂಪ್ಯೂಟರ್ ಮುಖ್ಯಸ್ಥ ದಿವಂಗತ ಸ್ಟೀವ್ ಜಾಬ್ಸ್. ಸ್ಟೀವ್ ಜಾಬ್ಸ್‌ಗೆ ಬ್ಲಾಗರ್‌ನೊಬ್ಬ ‘ಜಗತ್ತಿನೆಲ್ಲೆಡೆ ನಿಮ್ಮ ಕಂಪನಿಯ ಕಂಪ್ಯೂಟರ್, ಐಫೋನ್, ಐಪಾಡ್, ಐಪಾಡ್ ಟಚ್ ಮುಂತಾದ ಉಪಕರಣಗಳೆಲ್ಲ ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವುದನ್ನು ನೋಡಿದರೆ ಭಯವಾಗುತ್ತದೆ. ಇವೆಲ್ಲವುಗಳನ್ನು ತಯಾರಿಸುವುದರಿಂದ ಪ್ರಕೃತಿ ಮೇಲೆ ಎಂಥ ಪರಿಣಾಮವಾಗಬಹುದು? ಈ ಉಪಕರಣಗಳನ್ನು ರೀಚಾರ್ಜ್ ಮಾಡಲು ಪ್ರತಿದಿನ ಎಷ್ಟು ಕರೆಂಟು ಬೇಕು? ಪರಿಸರದ ಮೇಲೆ ನೀವು ಎಂಥ ಆಕ್ರಮಣ ಮಾಡುತ್ತಿದ್ದೀರಿ ಎಂಬುದರ ಕಲ್ಪನೆ ನಿಮಗಿದೆಯಾ?’ ಎಂದು ಕೇಳಿದ್ದಕ್ಕೆ ಆತ ಸರಳವಾಗಿ, ನಿರುದ್ವಿಗ್ನನಾಗಿ ಹೇಳಿದ್ದು: Please go back to nature. And nature will find solutions”. ಪ್ರಾಯಶಃ ಇದಕ್ಕಿಂತ ಚುಟುಕಾದ, ಸಮರ್ಪಕ ಉತ್ತರ ಇದ್ದಿರಲಾರದು.
‘ನಮ್ಮ ಎಲ್ಲ ಸಮಸ್ಯೆಗಳಿಗೂ ಪ್ರಕೃತಿಯಲ್ಲಿ ಉತ್ತರವಿದೆ’. ಹಾಗೆಂದು ಕಾಲಕಾಲಕ್ಕೆ ತತ್ತ್ವಜ್ಞಾನಿಗಳು, ದಾರ್ಶನಿಕರು, ಸಾಧು-ಸಂತರು, ಆರ್ಥಿಕ ತಜ್ಞರು, ತಂತ್ರಜ್ಞಾನಿಗಳು, ವಿಜ್ಞಾನಿಗಳು ಹೇಳುತ್ತಲೇ ಬಂದಿದ್ದಾರೆ. ಓಶೋ ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ‘ನೀವು ಹೊಸದೇನನ್ನೂ ಆವಿಷ್ಕಾರ ಮಾಡಬೇಕಿಲ್ಲ. ಎಲ್ಲವೂ ಪ್ರಕೃತಿಯಲ್ಲಿಯೇ ಇದೆ. ನೀವೇನಾದರೂ ಮಾಡಬಹುದಾದ್ದು ಇದ್ದರೆ ಅದನ್ನು ನಕಲು ಮಾಡುವುದು ಅಷ್ಟೇ’ ಎಂದಿದ್ದು ಗೊತ್ತಿರಬಹುದು. ಟಾಟಾ ಸಂಸ್ಥೆಯಲ್ಲಿ ಉನ್ನತ ಹುದ್ದೆಯಲ್ಲಿರು…